ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಯ KSDL ತನ್ನ ಲಾಭಾಂಶದ ₹54. 74 ಕೋಟಿಯ ಚೆಕ್ ಅನ್ನು ಮಾನ್ಯ ವಿಜಯಪುರ ಜಿಲ್ಲೆಯ ಬಬಲೇಶ್ವರ ಶಾಸಕ ಹಾಗೂ ಸಚಿವ ಎಂ. ಬಿ. ಪಾಟೀಲ ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೂ ₹ 5 ಕೋಟಿ ಚೆಕ್ ನೀಡಲಾಯಿತು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರಾದ ಶ್ರೀ ರಜನೀಶ್ ಗೋಯಲ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.