ವಿಜಯಪುರ : ನಗರದ ದರ್ಬಾರ್ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಕೃಷ್ಣಾಜಲಾಂದೋಲನ ಬೃಹತ್ ಪ್ರತಿಭಟನಾ ಸಮಾವೇಶವನ್ನು ಕೆಪಿ ಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ವಿಪಕ್ಷ ನಾಯಕ ಸಿದ್ಧರಾಮಯ್ಯಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ ಸೇರಿ ಕಾಂಗ್ರೆಸ್ ನಾಯರು ಉದ್ಘಾಟಿಸಿದರು.ಪ್ರಾಸ್ತಾವಿಕ ಭಾಷಣ ಮಾಜಿ ಜಲಸಂಪನ್ಮೂಲ ಸಚಿವ ಬಬಲೇಶ್ವರ ಶಾಸಕ ಎಂಬಿ ಪಾಟೀಲ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಕೃಷ್ಣಾಕೊಳ್ಳದ ನೀರಾವರಿ ಸೇರಿದಂತೆ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ರೂ. 2ಲಕ್ಷ ಕೋಟಿ ಅನುದಾನ ಮೀಸಲಿರಿಸಲು ಪಕ್ಷ ಸಂಕಲ್ಪ ಮಾಡಿರುವುದನ್ನು ಅಧಿಕೃತವಾಗಿ ಪ್ರಕಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್ ಕೆ ಪಾಟೀಲ ಸತೀಶ ಜಾರಕಿಹೊಳಿ ಶಿವಾನಂದ ಪಾಟೀಲ್ ಶಾಸಕ ಯಶವಂತರಾಯಗೌಡ ಪಾಟೀಲ ಜಿಲ್ಲಾಧ್ಯಕ್ಷ ಪ್ರೊ ರಾಜು ಆಲಗೂರ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.