ಹಾವೇರಿಯ ಆಲದಕಟ್ಟಿಯಲ್ಲಿರುವ ಪಟಾಕಿ ಗೋದಾಮಿನಲ್ಲಿ ನಡೆದ ಬೆಂಕಿ ಅವಘಡದಲ್ಲಿ ನಾಲ್ಕು ಜನರು ಸಜೀವ ದಹನವಾದ ಸುದ್ದಿ ತಿಳಿದು ದುಃಖವಾಗಿದೆ. ಈ ಅವಘಡದ ಬಗ್ಗೆ ಹೆಚ್ಚಿನ ವರದಿ ತರಿಸಿಕೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಮತ್ತೊಮ್ಮೆ ಇಂತಹ ದುರ್ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲು ಸೂಚಿಸಿದ್ದೇನೆ ಸಚಿವ ಪಾಟೀಲ ತಿಳಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5ಲಕ್ಷ ಪರಿಹಾರಘೋಷಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.