ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆದಿದೆ. ಸಮ್ಮೇಳನವನ್ನು ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸಬೇಕು ಹಾಗೂ ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಬೇಕು, ಸಮ್ಮೇಳನಾಧ್ಯಕ್ಷರನ್ನು ಆಯ್ಕ ೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.