ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 30 ಸಾವಿರ ನೌಕರರನ್ನು ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ, ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ವಿಧಾನ ಪರಿಷತ್ ನಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಥಳೀಯ ಗ್ರಾಮ ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಆದರೆ ಅವರು ಸ್ಥಳೀಯ ಗ್ರಾಮ ಪಂಚಾಯ್ತಿನೌಕರರಾಗಿದ್ದು, ಅವರನ್ನು ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದರಡಿಯಲ್ಲಿ ಬಿಲ್ ಕಲೆಕ್ಟರ್, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್, ಕ್ಲೀನರ್ ಸೇರಿ ಹಲವರು ಬರಲಿದ್ದು, ಅವರು ಸರ್ಕಾರಿ ವೇತನ ಶ್ರೇಣಿಯಿಂದ ಹೊರಗುಳಿಯಲಿದ್ದಾರೆ.