ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗಿರುವ ಮಠಗಳ ಮತ್ತು ರೈತರ ಆಸ್ತಿಯ ಪಹಣಿಯಲ್ಲಿ ವಕ್ಸ್ ಆಸ್ತಿ ಎಂಬ ದಾಖಲೆ ಉಂಟಾದ ಪರಿಣಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಕ್ಸ್ ಸಚಿವ ಜಮೀರ್ ಅಹ್ಮದ್ ನೇರ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಮತ್ತು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಿನ್ನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ರೈತರು ನಡೆಸುತ್ತಿರುವ ಧರಣಿಗೆ ಬೆಂಬಲ ಸೂಚಿಸಲು ಅವರು ಆಗಮಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಾಟೀಲ ಅವರು, ರೈತರು ಮತ್ತು ಮಠಗಳಿಗೆ ಸೇರಿದ ಆಸ್ತಿಯ ಪುನರ್ವ್ಯಾಖ್ಯಾನವು ರೈತರಿಗೆ ಅನ್ಯಾಯ ಮಾಡುತ್ತಿರುವುದಾಗಿ ಹೇಳಿದರು.