ವಿಜಯಪುರ: ಇಂದಿನ ಆಧುನಿಕ ವ್ಯಾಪಾರೀಕರಣವು ಸಂಪೂರ್ಣ ಯುವಕರ ಮೇಲೆ ನಿಂತಿದೆ. ಅವರೇ ವ್ಯಸನಿಗಳಾದರೆ ದೇಶದ ಅರ್ಥವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
ಅವರು ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಸನ ಮುಕ್ತ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಮಾದಕ ವಸ್ತುಗಳ ಮೇಲೆ ಹಾನಿಕಾರಕ ಎಂಬ ಮಾಹಿತಿ ಇದ್ದರು ಸಹಿತ ಅದರಿಂದ ಯುವಜನತೆ ದೂರವಾಗದಿರುವುದು ವಿಷಾದನೀಯ ಸಂಗತಿ. ಇದರಿಂದ ದೇಶದಲ್ಲಿ ಅನೇಕ ಕುಟುಂಬಗಳು ಬೀದಿಪಾಲಾಗುತ್ತಿವೆ ಎಂದು ತಿಳಿಸಿದ ಅವರು ಸ್ವಚ್ಛಂದ ಸಮಾಜ ನಿರ್ಮಾಣಕ್ಕೆ ಯುವಕರು ಸನ್ನದ್ಧರಾಗಬೇಕು ಎಂದರು.
ಶಿಕ್ಷಕ ರಾಘು ಮೊಗಳ ಮಾತನಾಡಿ,ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ. ವಿದ್ಯಾರ್ಥಿಗಳು, ಯುವಕರು ಈ ದಿಸೆಯಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದರು.
ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.ಶಿಕ್ಷಕರಾದ ಜಯಶ್ರೀ ಬಂಗಾರಿ, ಅಂಬಿಕಾ ಶಿರಕನಹಳ್ಳಿ, ಬಸಮ್ಮ ವಡಗೇರಿ, ಮಧುಮತಿ ನಿಕ್ಕಂ, ಸರೋಜನಿ ಕಟ್ಟಿಮನಿ, ರೇಣುಕಾ ಭಜಂತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.