ಇಂಡಿ ತಾಲೂಕಿನ ಮರಗೂರ ಗ್ರಾಮದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ನಕಲಿ ಮತದಾನಕ್ಕೆ ಯತ್ನಿಸಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಹುದ್ದೆಗೆ ಸ್ಪರ್ಧೆ ಮಾಡಿದ್ದ ಮಾಜಿ ಶಾಸಕರು ಆದ ಸಾರ್ವಭೌಮ ಬಗಲಿ ದೂರು ದಾಖಲು ಮಾಡಿದ್ದಾರೆ. ಮೃತ ಪಟ್ಟ ವ್ಯಕ್ತಿಯ ಹೆಸರಿನಲ್ಲಿ ಬೇರೊಬ್ಬ ವ್ಯಕ್ತಿ ಮತದಾನ ಮಾಡಲು ಬಂದಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.