ಲಂಚ ಸ್ವೀಕರಿಸುತ್ತಿರುವ ವೇಳೆ ಮಹಿಳಾ ಸಬ್ ಇನ್ಸ್ಪೆಕ್ಟರ್, ಲೋಕಾಯುಕ್ತ ಪೊಲೀಸರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಮೈಸೂರಲ್ಲಿ ನಡೆದಿದೆ. ಕ್ರಿಮಿನಲ್ ಕೇಸ್ಗೆ ಸಂಬಂಧಿಸಿದಂತೆ ಕುವೆಂಪು ನಗರದ ಪೊಲೀಸ್ ಸ್ಟೇಷನ್ನ ಸಬ್ ಇನ್ಸ್ಪೆಕ್ಟರ್ ರಾಧಾ ವ್ಯಕ್ತಿಯೋರ್ವರಿಂದ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಈ ಹಣವನ್ನು ಸ್ಟೇಷನ್ನಲ್ಲಿ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಹಣದೊಂದಿಗೆ ಅವರನ್ನು ಬಂಧಿಸಿದ್ದಾರೆ.