ಶಾಸಕ ಜಮೀರ್ ಅಹ್ಮದ್ ಗೆ ಬೆಳ್ಳಂ ಬೆಳಿಗ್ಗೆ ಎಸಿಬಿ ಶಾಕ್ ನೀಡಿದೆ۔ ಜಮೀರ್ ಅವರಿಗೆ ಸೇರಿದ ಮನೆ ಕಚೇರಿಗಳ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರು ನಗರದ 5 ಕಡೆಗಳಲ್ಲಿ 40 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂಬ ಮಾಹಿತಿ ದೊರೆತಿದೆ.
ನಗರದ ಕಂಟೋನ್ಮೆಂಟ್ ರೈಲ್ವೇ ವಲಯದ ಜಮೀರ್ ಅಹಮದ್ ಅವರ ನಿವಾಸ, ಸಿಲ್ವರ ಓಕ್ ಅಪಾರ್ಟ್ಮಂಟ್ ನ ಫ್ಲಾಟ್ ಸದಾಶಿವನಗರದಲ್ಲಿರುವ ಅತಿಥಿಗೃಹ ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ ಕಚೇರಿ ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆಸಿರುವ ಎಸಿಬಿ ತಂಡಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಜಮೀರ್ ಅಹ್ಮದ್ ಮೇಲೆ ಆದಾಯ ಮೀರಿದ ಆಸ್ತಿಗಳಿಕೆ ಆರೋಪವಿದೆ.