ದೀಪಾವಳಿ ಹಬ್ಬವನ್ನು ನವೆಂಬರ್ ೧೧ ರಿಂದ ೧೫ ರವರೆಗೆ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಬಳಸುವ ಮೂಲಕ ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವಂತೆ ಡಿಸಿ ಸೂಚಿಸಿದ್ದಾರೆ ನ್ಯಾಯಾಲಯ ರಿಟ್ ಪಿಟಿಷನ್ ನಲ್ಲಿ ನೀಡಿದ ನಿರ್ದೇಶನದಂತೆ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ರಾತ್ರಿ ೧೦: 00ಗಂಟೆಯ ವರಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದೆ.