ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಡಕಛೇರಿಯಲ್ಲಿ ದಲ್ಲಾಳಿಗಳ ಹಾವಳಿ ಮತ್ತು ಉಪ ತಶೀಲ್ದಾರ ಸೇರಿದಂತೆ ಅಧಿಕಾರಿಗಳು, ಸಾರ್ವಜನಿಕರಿಗೆ ಕೈಗೆ ಸಿಗದೆ, ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಯುವಜನ ಸೇವೆ ರಾಜ್ಯ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ಒಂದು ವೇಳೆ ಈ ಪ್ರವೃತ್ತಿ ಮುಂದುವರೆದರೆ ನಾಲತವಾಡ ಹಾಗೂ ಮುದ್ದೇಬಿಹಾಳ ತಶೀಲ್ದಾರ ಕಚೇರಿಯಲ್ಲಿ ಎಲ್ಲ ಕನ್ನಡಪರ ಸಂಘಟನೆಗಳು ಬೆಂಬಲದಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಮತ್ತು ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಗುರು ತಂಗಡಗಿ ಮತ್ತು ಮುದ್ದೇಬಿಹಾಳ ತಾಲೂಕಿನ ಯುವಜನಸೇನೆಯ ಎಲ್ಲ ಪದಾಧಿಕಾರಿಗಳು ಮನವಿ ಸಲ್ಲಿಸಿದರು.