ಭಾರತೀಯ ಸೇನಾ ಸಿಬ್ಬಂದಿ ಪಾಕಿಸ್ತಾನದ ಹನಿಟ್ರ್ಯಾಪ್ ಗೆ ಸಿಲುಕಿ ಮಾಹಿತಿ ಸೋರಿಕೆ ಮಾಡಿರುವ ಆರೋಪದಡಿ ಬಂಧಿಸಲಾಗಿದೆ.ಪಾಕಿಸ್ತಾನಿ ಮಹಿಳಾ ಏಜೆಂಟರು ಭಾರತೀಯ ಸೇನಾ ಸಿಬ್ಬಂದಿ ಶಾಂತಿಮಯ ರಾಣಾನನ್ನು ಹನಿಟ್ರ್ಯಾಪ್ ಮಾಡಿದ್ದಾರೆ.
ಈ ಹಿನ್ನೆಲೆ ಪಾಕಿಸ್ತಾನಕ್ಕೆ ಸೇನಾ ಮಾಹಿತಿಯನ್ನು ಸೋರಿಕೆ ಮಾಡಿದ್ದಾನೆ ಎಂಬ ಆರೋಪದ ಮೇಲೆ ರಾಣಾನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ರಾಣಾ ವಿರುದ್ಧ 1923ರ ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ರಾಣಾ ಪಶ್ಚಿಮಬಂಗಾಳದ ಬಾಗುಂದ ಜಿಲ್ಲೆಯ ಲಾಂಛನಪುರ ಗ್ರಾಮದ ನಿವಾಸಿ ಅವನನ್ನು ಜೈಪುರದ ಘಟಕದಲ್ಲಿ ನಿಯೋಜಿಸಲಾಗಿತ್ತು. ಪಾಕಿಸ್ತಾನದ ಏಜೆಂಟ್ ಗಳಾದ ಗುರ್ನೌರ ಕೌರ ಅಲಿಯಾಸ್ ಅಂಕಿತ ಮತ್ತು ನಿಶಾ ಸೋಶಿಯಲ್ ಮೀಡಿಯಾ ಮೂಲಕ ರಾಣಾನನ್ನು ಸಂಪರ್ಕಿಸಿದ್ದಾಳೆ. ಬಳಿಕ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿಗಳು ಆತನಿಂದ ಪಡೆದಿದ್ದಾರೆ ಎಂದು ತಿಳಿದುಬಂದಿದೆ.