ಕಾಂಗ್ರೆಸ್ ನ 5 ಗ್ಯಾರೆಂಟಿಗಳಲ್ಲಿ ಒಂದಾದ ಯುವನಿಧಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಇಂದು ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, “ಯುವ ನಿಧಿ” ಯೋಜನೆ ಈ ವರ್ಷದ ಅಂತ್ಯದೊಳಗೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದರು. ಯುವನಿಧಿ ಯೋಜನೆಯಡಿ 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದ, ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರರಿಗೆ ಪ್ರತಿ ತಿಂಗಳು 3,000 ರೂ. ಹಾಗೂ ಡಿಪ್ಲೊಮಾ ದವರಿಗೆ 1,500 ರೂ. ನಿರುದ್ಯೋಗ ಭತ್ಯೆ ಸಿಗಲಿದೆ.