ಕೈಗಾರಿಕಾ ಕ್ರಾಂತಿ ಉದ್ಯೋಗ ಸೃಷ್ಟಿಯತ್ತ ದಿಟ್ಟ ಹೆಜ್ಜೆ ಇಡಲು ರೂ. 34, 114 ಕೋಟಿ ರೂ. ಹೂಡಿಕೆಗೆ ಅನುಮೋದನೆ ಪಡೆಯಲಾಗಿದೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ಸುವರ್ಣ ಸೌಧದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ 34, 114 ಕೋಟಿ ರೂ. ಹೂಡಿಕೆಗೆ ಅನುಮೋದನೆ, ಒಟ್ಟು 24 ಉದ್ಯಮಗಳ ಸ್ಥಾಪನೆಗೆ ಒಪ್ಪಿಗೆ, 13, 308 ಉದ್ಯೋಗ ಸೃಷ್ಟಿಯ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ರೂ 9, 461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದಿದ್ದಾರೆ.