ಕರ್ನಾಟಕ ಸರ್ಕಾರ ಜಿಲ್ಲೆಯ ರೈತರಿಗೆ ಬರ ಪರಿಹಾರವಾಗಿ 36010. 20 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಇದು ರೈತರ ಬರ ಪರಿಹಾರ ಹಣವಾಗಿರುವುದರಿಂದ ಯಾವುದೇ ಕಾರಣಕ್ಕೂ ರೈತರ ಸಾಲಗಳಿಗೆ ಈ ಹಣವನ್ನು ಕಡಿತಗೊಳಿಸಬಾರದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದ್ದಾರೆ. ಈ ಕುರಿತು ಲಿಖಿತ ಪತ್ರ ಬರೆದು, ರಾಜ್ಯ ಸರ್ಕಾರದಿಂದ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿದೆ. ಇದನ್ನು ರೈತರ ಸಾಲದ ಖಾತೆಗೆ ಜಮೆ ಮಾಡಿಕೊಳ್ಳಬಾರದು ಎಂದು ತಿಳಿಸಿದ್ದಾರೆ.