ನಾನು ವಾಪಸ್ ಬಿಜೆಪಿಗೆ ಸೇರುವ ಪ್ರಶ್ನೆಯೇ ಇಲ್ಲ. ಇನ್ನೂ ಕಾಂಗ್ರೆಸ್ ಸೇರುವುದಂತೂ ಸಾಧ್ಯವೇ ಇಲ್ಲ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಮೆಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿಗೆ ನಾನು ಸಿದ್ದನಿದ್ದೇನೆ. ಹಾಗೆಂದು ಕೆಆರ್ಪಿಪಿಯನ್ನು ವಿಲೀನ ಮಾಡುವುದಿಲ್ಲ. ನನ್ನ ಜೊತೆ ಮಾತನಾಡಿರುವ ಹಿರಿಯರಿಗೆ ನನ್ನ ವಿಚಾರ ಹೇಳಿದ್ದೇನೆ.