ಇಂಡಿ : ಪಟ್ಟಣದಲ್ಲಿ ಫೆಬ್ರುವರಿ ತಿಂಗಳಲ್ಲಿ ಕಾಂಗ್ರೆಸ್ ಯುವ ಘಟಕದ ವತಿಯಿಂದ ಯುವ ಸಮುದಾಯದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು, ಈಗಾಗಲೇ ಯುವ ಸಮುದಾಯದ ಸಂಘಟನೆ ನಡೆದಿದೆ.ಯುವಕರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಕೊಂಡಿದ್ದಾರೆ. ಎಂದು ಕಾಂಗ್ರೆಸ್ ಯುವ ಘಟಕದ ತಾಲೂಕು ಅಧ್ಯಕ್ಷ ಅವಿನಾಶ ಬಗಲಿ ಹೇಳಿದರು. ಈ ಕುರಿತು ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ.ಶಾಸಕ ಯಶವಂತರಾಯಗೌಡ ಪಾಟೀಲ ಅವರ ಅಭಿವೃದ್ಧಿ ಕಾರ್ಯಗಳಿಂದ ಇಂಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದರು.ಇನ್ನೂ ಸರ್ವರಿಗೂ ಸಮಪಾಲು, ಸಮಬಾಳು ತತ್ವಸಿದ್ಧಾಂತದ ಮೇಲೆ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷದ ಕಡೆಗೆ ದೇಶ, ರಾಜ್ಯದ ಜನತೆ ಬರುತ್ತಿದ್ದಾರೆ.ಬಿಜೆಪಿಯ ಸುಳ್ಳು ಭರವಸೆ ಯಿಂದ ಜನರು ಬೆಸತ್ತಿದ್ದಾರೆ ಎಂದು ಆರೋಪಿಸಿದರು. ಇಂಡಿಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಲಿದ್ದು, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪಟ್ಟಣದಲ್ಲಿ ಹಮ್ಮಿಕೊಂಡ ಅಭಿವೃದ್ಧಿ ಕಾಮಗಾರಿಗಳು, ಸರ್ವಜನಾಂಗದ ಜೊತೆ ಒಳ್ಳೆಯ ಒಡನಾಟ ಹಾಗೂ ಸರ್ವಜನಾಂಗದ ಒಳಿತು ಬಯಸುವುದರಿಂದ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿಸಿದರು.