ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಜೋಡಿ ಕೊಲೆಯಾದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಜಮೀನೊಂದರಲ್ಲಿ ಬುಧವಾರ ನಡೆದಿದೆ. ಸೋಮನಿಂಗ ಕುಂಬಾರ್ (40) ಮತ್ತು ರೇಣುಕಾ ತಳವಾರ್ (45) ಕೊಲೆಯಾದವರು. ಇನ್ನೂ ಆರೋಪಿ ನಾಪತ್ತೆಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.