ಬಿ.ಇಡಿ (B.ED) ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.11ರವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಹಾಂತೇಶ್ ಕೌಜಲಗಿ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ‘ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಫಲಿತಾಂಶ ವಿಳಂಬ ಹಿನ್ನೆಲೆ ಬಿ.ಎಡ್. ಪ್ರವೇಶ ನೋಂದಣಿ ಕೊನೆಯ ದಿನವನ್ನು ವಿಸ್ತರಿಸಲಾಗಿದೆ ಎಂದು ಹೇಳಿದರು.