ಮಂಗಳೂರು ಬಾಂಬ್ ಸ್ಫೋಟ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಾರಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಬಾಂಬು ಸ್ಪೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ.
ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದಿದ್ದಾರೆ.ಮಂಗಳೂರು ಬಾಂಬು ಸ್ಪೋಟ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ.ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಜನತೆ ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ರಾಜ್ಯದ ಜನರಲ್ಲಿ ಕೇಳಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.