ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಬಸ್ ನಿಲ್ದಾಣದಲ್ಲಿ ಮಂಗಳವಾರ ತಡರಾತ್ರಿ ವೃದ್ದ ನೇಣಿಗೆ ಶರಣಾದ ಘಟನೆ ನಡೆದಿದೆ. ಬಸ್ ಸ್ಟಾಂಡ್ನ ಜಾಹೀರಾತು ಫಲಕ ಅಳವಡಿಕೆಗೆ ಹಾಕಿದ್ದ ಕಬ್ಬಿಣದ ಕಂಬಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಹುಣಶ್ಯಾಳ ಗ್ರಾಮದ ಭೀಮಪ್ಪ ಡೋಣುರ (76) ಸಾವಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.