ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.ಚಂದ್ರಶೇಖರ ಕೊಟ್ರಪ್ಪ ಕಡೂರ 51 ಆತ್ಮಹತ್ಯೆಗೆ ಶರಣಾಗಿರುವ ರೈತನಾಗಿದ್ದಾರೆ.ಬ್ಯಾಂಕ್ ಸೇರಿದಂತೆ ವಿವಿಧೆಡೆ ಸುಮಾರು 8 ಲಕ್ಷ ಖಾಸಗಿ ಸಾಲ ಮಾಡಿಕೊಂಡಿದ್ದರು.ತನ್ನದೇ ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.