ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಜರುಗಿದ 75 ನೇ ವರ್ಷದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶ್ರೀ ಶಾಂತೇಶ್ವರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘನ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಶ್ರೀ ಪ್ರಭಾಕರ್ ಎಸ್ ಬಗಲಿಯವರು ಅಧ್ಯಕ್ಷತೆ ವಹಿಸಿದ್ದರು.ಇದರಲ್ಲಿ ಆಡಳಿತ ಮಂಡಳಿಯ ಸರ್ವ ಸದಸ್ಯರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .ಈ ಧ್ವಜಾರೋಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಶ್ರೀ ಪ್ರಭಾಕರ್ ಎಸ್ ಬಗಲಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ.ರಾಘವೆಂದ್ರ ಕುಲಕರ್ಣಿ ನಿರೂಪಿಸಿದರು, ಬಿ ಎನ್ ರಾಠೋಡ ವಂದಿಸಿದರು.ಶ್ರೀಧರಗೌಡ.ಬಿರಾದಾರ ಉಪನ್ಯಾಸಕರು ಹಾಗೂ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ/ವಿದ್ಯಾರ್ಥಿನಿಯರು ಹಾಜರಿದ್ದರು.