ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಇದೀಗ ಮೈಸೂರಿನಲ್ಲಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಅವರು ದೀಪವನ್ನು ಹಚ್ಚುವ ಮೂಲಕ ಉದ್ಘಾಟಿಸಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸೇರಿ ಹಲವರು ಉಪಸ್ಥಿತಿ ವಹಿಸಿದ್ದರು.