ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ.ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.ಅಧಿಕಾರಿಗಳು ಮೊದಲು ಮತ ಪತ್ರಗಳನ್ನು ಎಣಿಕೆ ಮಾಡಲಿದ್ದು, ನಂತರ ಇವಿಎಂಗಳಿಂದ ಮತಗಳನ್ನು ಎಣಿಸಲಿದ್ದಾರೆ.ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ದೇಶದಾದ್ಯಂತ ಭಾರೀ ಕುತೂಹಲ ಮೂಡಿಸಿವೆ. ಗುಜರಾತಿನಲ್ಲಿ 27 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಮತ್ತೊಮ್ಮೆ ಸರ್ಕಾರ ರಚಿಸುವ ಹಂಬಲದಲ್ಲಿದೆ.ಎಕ್ಸಿಟ್ ಪೋಲ್ಗಳು ಬಿಜೆಪಿ ಪರವಾಗಿ ಬಂದಿವೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.ಇನ್ನು ಕೆಲವೇ ಗಂಟೆಗಳಲ್ಲಿ ವಿಜೇತರು ಯಾರು ಎಂಬುದು ಗೊತ್ತಾಗಲಿದೆ.