ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ನನ್ನ ವಿರೋಧವಿದೆ. ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದೆ, ಈ ವೇಳೆ ಯಾವ ಜಾತಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು ಎಂದರು.