ಭಾರತದ ವಿರುದ್ಧ ಚೀನಾ ಸಮರಕ್ಕೆ ಸಿದ್ಧತೆ ನಡೆಸುತ್ತಿದ್ದರೆ ನರೇಂದ್ರ ಮೋದಿ ಸರ್ಕಾರ ನಿದ್ದೆಯಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.ಚೀನಾದಿಂದ ಬೆದರಿಕೆ ಸ್ಪಷ್ಟವಾಗಿದೆ.ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ, ಆಕ್ರಮಣಕ್ಕೆ ಅಲ್ಲ. 2-3 ವರ್ಷಗಳಿಂದ ಇದೇ ಮಾತನ್ನು ಹೇಳುತ್ತಿದ್ದರೂ ಸರ್ಕಾರ ಗಮನಹರಿಸುತ್ತಿಲ್ಲ. ಇದನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ.ಈ ಪ್ರವೃತ್ತಿ ಸರಿಯಲ್ಲ. ಅರುಣಾಚಲ ಪ್ರದೇಶ ಮತ್ತು ಲಡಾಖ್ನಲ್ಲಿ ಅಪಾಯಕಾರಿ ಸಿದ್ಧತೆಗಳನ್ನು ನಡೆಸುತ್ತಿರುವಾಗ ನಮ್ಮ ಸರ್ಕಾರ ನಿದ್ರಿಸುತ್ತಿದೆ ಎಂದು ರಾಹುಲ್ ಟೀಕಿಸಿದ್ದಾರೆ.