ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೌದು, 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೌಕರರು ಕಾತುರದಿಂದ ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ. ಇಂದು(ಜುಲೈ 15) ನಡೆದ ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ.