ನಗರದ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿನ್ನೆ ಸಾಯಂಕಾಲ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿ ಅಧಿಕಾರಿಗಳಿಗೆ ಸೂಚಿಸಿದರು.