ಭಾರತದ ಸಂವಿಧಾನವನ್ನು ವಿಶ್ವದ ಎಲ್ಲ ದೇಶಗಳು ಗೌರವಿಸುತ್ತವೆ. ವಿಶ್ವದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು. ಭಾರತ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಏಕಕಾಲದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಭಾರತ ಸಂವಿಧಾನ ಪೀಠಿಕೆ ಬೋಧಿಸಿ ಬಳಿಕ ಮಾತನಾಡಿದರು.