ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯವನ್ನು ಜನರಿಗೆ ಹೇಳುವುದು ನನ್ನ ಕರ್ತವ್ಯ ಹಾಗೂ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಬಜೆಟ್ ಬಳಿಕ ಮಾತನಾಡಿದ ಅವರು,ಕೋಲಾರ ಸಂಸದರಾದ ಮುನಿಸ್ವಾಮಿಯವರು, ಸಂಸತ್ತಿನಲ್ಲಿ ಒಂದು ದಿನವೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬಾಯಿ ಬಿಡಲಿಲ್ಲ. ಐದು ವರ್ಷದಲ್ಲಿ ಒಂದು ಬಾರಿಯಾದರೂ ಮಾತನಾಡಿದ್ದಾರಾ? ಅವರು ಸಂಸದರಾಗಲು ಲಾಯಕ್ಕೇ? ಎಂದು ಗರಂ ಆಗಿದ್ದಾರೆ.