ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ಖಾಸಗಿ ಬಸ್ ಒಂದು ರಸ್ತೆಮಧ್ಯೆ ಹೊತ್ತಿ ಉರಿದ ಘಟನೆ ನಡೆದಿದ್ದು ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಜನತಾ ಟ್ರಾವೆಲ್ಸ್ ಗೆ ಸೇರಿದ ಬಸ್ ರಾಷ್ಟ್ರೀಯ ಹೆದ್ದಾರಿ 50ರ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಸಮೀಪ ಸಂಚರಿಸುತ್ತಿದ್ದಾಗ ಏಕಾಏಕಿ ಟೈರ್ ಬ್ಲಾಸ್ಟ್ ಆಗಿ ಅವಘಡ ಸಂಭವಿಸಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಚಾಲಕ ಬಸ್ ಅನ್ನು ನಿಲ್ಲಿಸಿದ್ದಾನೆ. ತಕ್ಷಣವೇ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ.
ಎಲ್ಲರ ಲಗೇಜ್ ಗಳು ಬೆಂಕಿಗಾಹುತಿಯಾಗಿವೆ. ಬೆಳೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಲಗೇಜ್ ನಲ್ಲಿ ಇದ್ದವು ಎಂದು ಪ್ರಯಾಣಿಕರು ಅಳಲು ತೋಡಿಕೊಂಡಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು, ಅಗ್ನಿ ಶಾಮಕದಳದ ಸಿಬ್ಬಂದಿ ದೌಡಾಯಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.