ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ 10ಕ್ಕೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಏಪ್ರಿಲ್ 13 ಅಧಿಸೂಚನೆ ಪ್ರಕ, ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನ , ಮೇ 10 ರಂದು ಒಂದೇ ಹಂತದಲ್ಲಿ ಮತದಾನ , ಮೇ 13 ರಂದು ಮತ ಎಣಿಕೆ , ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ.ಮೇ 10ರಂದು ಮತದಾನ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆ ಜಾರಿ ಬಂದಿದೆ.ಹಾಗಾಗಿ, ಇಂದಿನಿಂದ ಎಲ್ಲಾ ವಿಷಯಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಡಲಿದ್ದು, ಚುನಾವಣಾ ಅಕ್ರಮ ತಡೆಯುವಲ್ಲಿ ಕ್ರಮ ವಹಿಸಲಿದೆ. ಇಂದಿಂದ ರಾಜ್ಯಾದ್ಯಂತ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ನಡೆಯಲಿದೆ.
ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಲಿದೆ. ಮೊದಲ ಬಾರಿಗೆ,ಚುನಾವಣಾ ಆಯೋಗ ಮನೆಯಿಂದಲೇ ಮತದಾನದ ಆಯ್ಕೆಯನ್ನು ಒದಗಿಸುತ್ತಿದೆ ಎಂದು ಘೋಷಿಸಿದೆ. 80 ವರ್ಷ ಮೇಲ್ಪಟ್ಟವರಿಗೆ ಈ ಅವಕಾಶ ಕಲ್ಪಿಸಲಾಗಿದೆ.ಕರ್ನಾಟಕದಲ್ಲಿ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿದ್ದು, ಮೇ 23ರ ಒಳಗೆ ಹೊಸ ಸರ್ಕಾರ ರಚಿಸಲು ಚುನಾವಣಾ ಆಯೋಗ ತಿಳಿಸಿದೆ.
ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 5 ಕೋಟಿ 21 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ. ಈ ಪೈಕಿ 2 ಕೋಟಿ 31 ಲಕ್ಷ ಮಹಿಳಾ ಮತದಾರರು ಹಾಗೂ 4,699 ತೃತೀಯ ಲಿಂಗ ಮತದಾರರು ಇದ್ದಾರೆ.ಮೇ 23ಕ್ಕೆ ಪ್ರಸ್ತುತ ವಿಧಾನಸಭೆ ಅವಧಿ ಅಂತ್ಯವಾಗಲಿದೆ. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆ ಆಗಬೇಕು ಎಂದು ಚುನವಾಣಾ ಅಯೋಗ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ.