ಮುಂಬರುವ ಲೋಕಸಭಾ ಚುನಾವಣೆಯ ಸೆಮಿ ಫೈನಲ್ಸ್ ಎಂದೇ ಕಾಂಗ್ರೆಸ್ ಬಿಂಬಿಸುತ್ತಿದ್ದ ಚುನಾವಣೆಗಳಲ್ಲಿ ಕಾಂಗ್ರೆಸ್ ನೆಲಕ್ಕಚ್ಚಿದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಲಢ ದಲ್ಲಿ ಮತದಾರರು ಬಿಜೆಪಿಯ ವಿಜಯ ಪತಾಕೆ ಹಾರಿಸಿ ಮೋದಿ ಗ್ಯಾರಂಟಿಯೊಂದೇ ನಂಬಲರ್ಹ ಗ್ಯಾರಂಟಿ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಪ್ರಕಟಣೆಯ ಮೂಲಕ ರೈತಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ತಿಳಿಸಿದ್ದಾರೆ.