ಬಾಲಿವುಡ್ ನಟರಾದ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಲೋತ್ರಾ ಮಂಗಳವಾರ ರಾಜಸ್ಥಾನದ ಜೈಸಲೇರ್ನಲ್ಲಿ ನಡೆದ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಕುರಿತ ಫೋಟೋಗಳನ್ನು ಹಂಚಿಕೊಂಡಿರುವ ಜೋಡಿ,’ಅಬ್ ಹುಮಾರಿ ಶಾಶ್ವತ್ ಬುಕಿಂಗ್ ಹೋಗಾಯಿ ಹೈ. ನಮ್ಮ ಮುಂದಿನ ಪ್ರಯಾಣದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಪ್ರೀತಿಯನ್ನು ಬಯಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.