ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ರೋಹಿತ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ. ಇದೇ ತಿಂಗಳ 14ರಿಂದ ನಡೆಯಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ನಾಯಕತ್ವ ಕೆಎಲ್ ರಾಹುಲ್ ಅವರಿಗೆ ಹಸ್ತಾಂತರವಾಗಲಿದೆ ಎಂದು ವರದಿಯಾಗಿದೆ.ರೋಹಿತ್ ಶರ್ಮಾ ಟೆಸ್ಟ್ ಸರಣಿಯಲ್ಲಿ ಇಲ್ಲದ ಕಾರಣ ರಾಹುಲ್ ಗೆ ನಾಯಕತ್ವ ಹಸ್ತಾಂತರಿಸಲು ಬಿಸಿಸಿಐ ಮುಂದಾಗಿದೆಯಂತೆ. ಟೆಸ್ಟ್ ಸರಣಿಯ ಭಾಗವಾಗಿ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.