ಜಮೀನಿನ ತಾತ್ಕಾಲಿಕ ಪೋಡಿ ಮಾಡಲು 47, 500 ಲಂಚ ಕೇಳಿದ್ದ ಸರ್ವೆಯರ್ ಹಾಗೂ ಖಾಸಗಿ ವ್ಯಕ್ತಿಯೊರ್ವ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಸರ್ವೆಯರ್ ಮಲ್ಲಪ್ಪ ಜಂಬಗಿ, ಖಾಸಗಿ ಸಹಾಯಕ ಗುರುದತ್ತ ಬಿರಾದಾರ ಲೋಕಾಯುಕ್ತ ಬಲೆಗೆ ವ್ಯಕ್ತಿಗಳು. ಇವರು ನಾಲ್ಕು ಎಕರೆ ಜಮೀನಿನ ತತ್ಕಾಲ್ ಪೋಡಿ ಮಾಡಲು ಪ್ರಕಾಶ್ ಸಿಂಗೆ ಎಂಬುವರ ಬಳಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಸ್ವೀಕರಿಸುವ ವೇಳೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.