ನೀರನ್ನು ಹಿತವಾಗಿ ಮತ್ತು ಮಿತವಾಗಿ ಬಳಸದಿದ್ದರೆ ಮುಂದಿನ ಒಂದು ದಶಕದಲ್ಲಿ ಜಲಸಂಕಷ್ಟ ಎದುರಾಗಲಿದೆ. ಈಗಿನಿಂದಲೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ. ನಗರದ ಬಿ. ಎಲ್. ಡಿ. ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಗ್ರಾಮೀಣ ಪುನಶ್ಚತನ ಕೇಂದ್ರ ಆಯೋಜಿಸಿದ್ದ ಸಾವಯವ ಕೃಷಿ ಪದ್ಧತಿ ಮತ್ತು ಕೃಷಿ ಉತ್ಪನ್ನಗಳ ಮಾರುಕಟ್ಟೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.