ಇಂಡಿ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಶಾಸಕ ಯಶವಂತರಾಯಗೌಡ ಪಾಟೀಲ ಅವರು ನಡೆಸಿದರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಉಪ ವಿಭಾಗಾಧಿಕಾರಿಗಳು ತಾಲೂಕಾ ದಂಡಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.