ಇಂಡಿ ಪಟ್ಟಣದ ತಾಲೂಕಾ ಆಡಳಿತ ಸೌಧದಲ್ಲಿ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ವಿಧಾನ ಸಭೆಯ ಅಂದಾಜು ಸಮಿತಿಯ ಅಧ್ಯಕ್ಷರಾದ ಯಶವಂತರಾಯಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸನ್ 2023-24 ನೇ ಸಾಲಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ (ಕೆ. ಡಿ. ಪಿ) ಪ್ರಗತಿ ಪರಶೀಲನಾ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿ, ಅನುದಾನ ಬಳಕೆ ಹಾಗೂ ಸರ್ಕಾರದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದರು.