ಇಂಡಿ ನಗರದ ಅಮರ್ ಹೋಟೆಲ್ ಆವರಣದಲ್ಲಿ ನಡೆದ 137 ಕೋಟಿ ರೂಪಾಯಿ ಅನುದಾನದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮವನ್ನು ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರು ನೆರವೇರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಕಂದಾಯ ಉಪ ವಿಭಾಗಾಧಿಕಾರಿಗಳಾದ ಅಭಿದ್ ಗದ್ಯಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಾವೀದ ಮೋಮಿನ, ಭೀಮಾಶಂಕರ ಸಕ್ಕರೆ ಕಾರ್ಖಾನೆಯ ನಿರ್ದೇಶಕರುಗಳಾದ ಬಿ ಎಂ ಕೋರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.