ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಇವರು ನವದೆಹಲಿಯಲ್ಲಿ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಗ್ಯಾರಂಟಿ ಯೋಜನೆಗಳಿಂದ ಆಗುತ್ತಿರುವ ವ್ಯತಿರಿಕ್ತ ಪರಿಣಾಮಗಳನ್ನು ಹಾಗೂ ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಹಾಗೂ ಬಜೆಟ್ ಮ್ಯಾನೇಜೆಂಟ್ ಕಾಯ್ದೆಯ ಉಲ್ಲಂಘನೆ ಸೇರಿದಂತೆ ಉಚಿತ ಭಾಗ್ಯ/ಯೋಜನೆಗಳಿಂದ ರಾಜ್ಯದ ಮೇಲೆ ಬೀರುವ ಪರಿಣಾಮದ ಬಗ್ಗೆ ವಿವರಿಸಿ, ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ಬಳಸಿ ಕ್ರಮ ಕೈಗೊಳ್ಳಬೇಕು ಎಂದು ಲಿಖಿತ ಮನವಿಯನ್ನು ಸಲ್ಲಿಸಿದರು.