ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಸೈದಾಪುರ ಸಮೀಪದ ಬಾಲಛೇಡದಲ್ಲಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಮಾದರಿ ವಸತಿ ಶಾಲೆಯ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಚಿತ್ರ ಚರ್ಮರೋಗದಿಂದ ಬಳಲುತ್ತಿದ್ದರೆ. ತುರಿಕೆ, ಗುಳ್ಳೆಗಳು, ಸುಕ್ಕುಗಟ್ಟಿದಂಥ ವಿಚಿತ್ರ ಚರ್ಮ ಸಮಸ್ಯೆಯಿಂದ ಮಕ್ಕಳು ನರಳುತ್ತಿದ್ದು, ನಿತ್ಯ ಇದೇ ಕಾರಣಕ್ಕೆ 15ರಿಂದ 20 ಮಕ್ಕಳು ಶಾಲೆಗೆ ಗೈರಾಗುತ್ತಿದ್ದಾರೆ.