ಕೊಪ್ಪಳ ತಾಲೂಕಿನ ಮತ್ತೂರು ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಹೆಣ್ಣು ಮಗು ಹುಟ್ಟಿದೆ. ಎಂಬ ಕಾರಣಕ್ಕೆ ನವಜಾತ ಶಿಶುವನ್ನು ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಜಿಲ್ಲೆಯಲ್ಲಿ ಮೇಲಿಂದ ಮೇಲೆ ಇಂತಹ ಪ್ರಕರಣಗಳು ನಡೆಯುತ್ತಲೇ ಇವೆ. ಸದ್ಯ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕಲಂ 176, 318, 201 ಅಡಿಯಲ್ಲಿ ಅಳವಂಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.