10 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ಕೂಡಲೇ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ಪತ್ರೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ 10 ಸಾವಿರ ಹುದ್ದೆ ನೇಮಕ ಪ್ರಕ್ರಿಯೆ ಶುರು ಮಾಡುತ್ತೇವೆ. 6,500 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲಾಗುತ್ತದೆ ಎಂದರು.