ಅಕ್ರಮವಾಗಿ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಮಾಡುವಾಗ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿಗೈದಿರುವ ಘಟನೆ ವಿಜಯಪುರ ನಗರದ ಶಾಸ್ತ್ರೀ ಮಾರ್ಕೆಟ್ನಲ್ಲಿ ನಡೆದಿದೆ. ಗುರು ಎಂಬುವರ ಅಂಗಡಿ ಸೀಜ್ ಮಾಡಲಾಗಿದೆ. ಅಲ್ಲದೇ, 80 ಚಿಕ್ಕ ಗಣೇಶ ಮೂರ್ತಿ, 250 ಮಧ್ಯಮ ಗಣೇಶ ಮೂರ್ತಿ, 100 ದೊಡ್ಡ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಪೊಲೀಸ ಹಾಗೂ ಅಂಗಡಿ ಮಾಲೀಕನ ಮಧ್ಯೆ ವಾಗ್ವಾದ ನಡೆದಿದೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.