ಜಿಲ್ಲೆಯಲ್ಲಿ ಆಚರಿಸಲ್ಪಡುವ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಕಾಲಕ್ಕೆ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಟಿ. ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ. ಸೆ. 19, ಸೆ. 23, ಸೆ. 25 ಹಾಗೂ ಸೆ. 27 ಹಾಗೂ ಸೆ. 29 ರಂದು ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಆದೇಶಿಸಿದೆ.