ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಕ್ಕೆ ಕರ್ನಾಟಕ ಬಂದ್ ಹಿನ್ನಲೆ, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದೆಂದು ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ಹೊರ ಹಾಕಿದರು. ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬಾರದೆಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತ ಉಮೇಶ ರುದ್ರಮುನಿ ಎಂಬಾತರು ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆಯನ್ನು ನಡೆಸಿ ಡಿಸಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.