ಇಂಡಿ: ತಾಲೂಕಿನ ಬರಗುಡಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕರಾದ ರವಿಕುಮಾರ ಕಪಲಿ ಅವರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯವರು ಶೈಕ್ಷಣಿಕ ಸಾಧನೆಗಾಗಿ ಕೊಡಮಾಡುವ ‘ಮಹಾತ್ಮ ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಜಿ ಎಸ್ ಕಾಂಬಳೆ ಹಾಗೂ ಕಾರ್ಯದರ್ಶಿ ರಮೇಶ ನಾಯಕ ತಿಳಿಸಿದ್ದಾರೆ.
ವಿಜಯಪುರದ ತೊರವಿಯಲ್ಲಿರುವ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜನೇವರಿ 21 ರವಿವಾರದಂದು ನಡೆಯಲಿರುವ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರವಿಕುಮಾರ ಕಪಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.